Twitter | Search | |
CM of Karnataka
Official Page of the Chief Minister's Office, Karnataka
7,449
Tweets
482
Following
605,058
Followers
Tweets
CM of Karnataka 13h
ಪಾವಗಡದ ನಿಡಗಲ್ ಗ್ರಾಮದಲ್ಲಿ ಕಲುಷಿತ ನೀರಿನಿಂದ ತಯಾರಿಸಿದರೆನ್ನಲಾದ ಆಹಾರ ಸ್ವೀಕರಿಸಿ ಬಾಲಕನೊಬ್ಬ ಮೃತಪಟ್ಟು,ಹಲವರು ಅಸ್ವಸ್ಥರಾಗಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ತುಮಕೂರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. ಆರೋಗ್ಯಾಧಿಕಾರಿಗಳು ಭೇಟಿ ನೀಡಿ ವರದಿ ಸಲ್ಲಿಸುವಂತೆ ಸಿಎಂ ಸೂಚಿಸಿದ್ದಾರೆ
Reply Retweet Like
CM of Karnataka May 21
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
Reply Retweet Like
CM of Karnataka May 21
ನವೀಕರಿಸಬಹುದಾದ ಇಂಧನ ಉತ್ಪಾದನೆ: ಮುಂಚೂಣಿಯಲ್ಲಿ ಕರ್ನಾಟಕ ---- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಇಂಟರ್ ನ್ಯಾಷನಲ್ ಸೋಲಾರ್ ಅಲಯನ್ಸ್ ನ ಸದಸ್ಯ ರಾಷ್ಟ್ರಗಳ ರಾಯಭಾರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿದ್ದರು.
Reply Retweet Like
CM of Karnataka May 21
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರು ಹಾಲು ಒಕ್ಕೂಟದ ನೂತನ ನಿರ್ದೇಶಕ ಮಂಡಳಿ ಸದಸ್ಯರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಸಚಿವ , ಸಚಿವ ಎಂ.ಟಿ.ಬಿ. ನಾಗರಾಜ್, ಚಿಕ್ಕಬಳ್ಳಾಪುರ ಸಂಸದ ಎಂ. ವೀರಪ್ಪ ಮೊಯ್ಲಿ, ಸಂಸದ ಡಿ.ಕೆ. ಸುರೇಶ್ ಉಪಸ್ಥಿತರಿದ್ದರು
Reply Retweet Like
CM of Karnataka May 21
ದೇಶದ ರಾಜಕಾರಣದಲ್ಲಿ ಮರೆಯಲಾಗದ ಹೆಸರು ರಾಜೀವ್ ಗಾಂಧಿ ಅವರದ್ದು. ದೇಶವನ್ನು ಮನ್ನಡೆಸುವ ಹಾದಿಯಲ್ಲಿ ಹುತಾತ್ಮರಾದ ರಾಜೀವ್ ಗಾಂಧಿ ಅವರ ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು ಅವರ ಚಿಂತನೆ ಎಲ್ಲರಿಗೂ ದಾರಿದೀಪವಾಗಲಿ.
Reply Retweet Like
CM of Karnataka May 20
Replying to @CMofKarnataka
ಧರ್ಮಸ್ಥಳದಲ್ಲಿ ತೀವ್ರ ನೀರಿನ ಅಭಾವದ ಹಿನ್ನೆಲೆಯಲ್ಲಿ ತಮ್ಮ ಪ್ರವಾಸ ಮುಂದೂಡುವಂತೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ್ದ ಪ್ರಕಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡಲೇ ಈ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದರು.
Reply Retweet Like
CM of Karnataka May 20
Replying to @CMofKarnataka
ನಂತರ ಅವರು ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಕಿಂಡಿ ಅಣೆಕಟ್ಟಿನ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಂದು ವಾರದೊಳಗೆ ಈ ಕುರಿತು ಸವಿವರವಾದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿ.ಪಂ. ಸಿಇಒ ಅವರು ಮುಖ್ಯ ಕಾರ್ಯದರ್ಶಿಗಳೀಗೆ ತಮ್ಮ ಭೇಟಿಯ ಕುರಿತು ಮಾಹಿತಿ ನೀಡಿದ್ದಾರೆ.
Reply Retweet Like
CM of Karnataka May 20
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ತೀವ್ರ ನೀರಿನ ಅಭಾವ ತಲೆದೋರಿರುವ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಯವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು
Reply Retweet Like
CM of Karnataka May 20
Replying to @CMofKarnataka
ಈ ಸಂದರ್ಭದಲ್ಲಿ ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಶ್ರೀ ಹೆಗ್ಗಡೆಯವರು ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು.ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದ.ಕ. ಜಿ.ಪಂ. ಸಿಇಒ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
Reply Retweet Like
CM of Karnataka May 20
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದರು.1/2
Reply Retweet Like
CM of Karnataka May 18
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣಕ್ಕೆ ಶ್ರೀ ರ ಕೊಡುಗೆ ಮಹತ್ವದ್ದು. ಕೋಮುವಾದಿ ಶಕ್ತಿಗಳ ವಿರುದ್ಧ ಜಾತ್ಯಾತೀತರನ್ನು ಒಗ್ಗೂಡಿಸುವಲ್ಲಿ ಅವರ ಪಾತ್ರವನ್ನು ದೇಶ ಎಂದೂ ಮರೆಯದು. ದೇವೇಗೌಡರ ನಡೆ ನನಗೆ ಸದಾ ಮಾರ್ಗದರ್ಶಿ.ಅವರ ಸಾಮಾಜಿಕ ಕಳಕಳಿ ನನಗೆ ಇಂದಿಗೂ ಆದರ್ಶ.ಅವರ ಹುಟ್ಟುಹಬ್ಬದ ದಿನದಂದು ಅವರ ಕೊಡುಗೆಯನ್ನು ಸ್ಮರಿಸುತ್ತೇನೆ
Reply Retweet Like
CM of Karnataka May 15
ಕುಡಿಯುವ ನೀರು ಸರಬರಾಜು ಹಾಗೂ ಜಾನುವಾರುಗಳಿಗೆ ಮೇವು ಸರಬರಾಜನ್ನು ಖಾತರಿ ಪಡಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿ ದಿನ ಗ್ರಾಮಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಸೂಚಿಸಿದರು.
Reply Retweet Like
CM of Karnataka May 15
Replying to @CMofKarnataka
ಈ ಸಂದರ್ಭದಲ್ಲಿ ಅವರು ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಸಂರಕ್ಷಣೆಗಾಗಿ ಮೇವು ಲಭ್ಯತೆ, ಗೋಶಾಲೆ ಹಾಗೂ ಮೇವು ಬ್ಯಾಂಕ್, ಉದ್ಯೋಗ ಸೃಜನೆ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಲಿದ್ದಾರೆ.
Reply Retweet Like
CM of Karnataka May 15
Replying to @CMofKarnataka
ಸಚಿವರಾದ ಆರ್.ವಿ.ದೇಶಪಾಂಡೆ, ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಕಂದಾಯ, ಆರ್ಥಿಕ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಜಲಸಂಪನ್ಮೂಲ, , ಸಣ್ಣ ನೀರಾವರಿ, ಇಲಾಖೆಯ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರ.
Reply Retweet Like
CM of Karnataka May 15
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಪ್ರಾರಂಭಿಸಿದ್ದಾರೆ.
Reply Retweet Like
CM of Karnataka retweeted
H D Kumaraswamy May 14
ಸಂಪುಟ ಸಹೋದ್ಯೋಗಿಯಾದ ಅವರಿಗೆ ಜನ್ಮ ದಿನದ ಶುಭಾಶಯಗಳು. ಅವರ ಸಮಾಜಮುಖಿ ಕೆಲಸಗಳು ಹಾಗೂ ಮುನ್ನೋಟ ರಾಜ್ಯದ ಪ್ರಗತಿಗೆ ಕಾರಣವಾಗಿದೆ. ಭಗವಂತನು ಅವರಿಗೆ ಹೆಚ್ಚಿನ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಆಶಿಸುತ್ತೇನೆ
Reply Retweet Like
CM of Karnataka retweeted
H D Kumaraswamy May 12
ನನ್ನ ಅಮ್ಮ.. ನನ್ನ ಹೆಮ್ಮೆ.. ನನ್ನ ಬೆಳಕು..
Reply Retweet Like
CM of Karnataka May 11
Reply Retweet Like
CM of Karnataka May 10
ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಜರುಗಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು.
Reply Retweet Like
CM of Karnataka May 10
Replying to @CMofKarnataka
ರಾಜ್ಯದ ಮೀಸಲಾತಿ ಅಧಿನಿಯಮ 2018ನ್ನು ಎತ್ತಿಹಿಡಿಯುವ ಸುಪ್ರೀಂಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರವು ಸಾಂವಿಧಾನಿಕ ಚೌಕಟ್ಟಿನಲ್ಲಿ ಸರ್ಕಾರಿ ನೌಕರರ ಹಿತರಕ್ಷಣೆಗೆ ಬದ್ಧವಾಗಿದೆ. ಎಲ್ಲರಿಗೂ ಅವಕಾಶ ಒದಗಿಸುವ ಸರ್ಕಾರದ ಸದುದ್ದೇಶವನ್ನು ಈ ತೀರ್ಪು ಬೆಂಬಲಿಸಿದೆ.
Reply Retweet Like