Twitter | Search | |
H D Kumaraswamy
ಹೆಮ್ಮೆಯ ಕನ್ನಡಿಗ | Former Chief Minister of Karnataka
623
Tweets
48
Following
126,615
Followers
Tweets
H D Kumaraswamy Aug 19
ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ತಂದು ಕೊಟ್ಟ, ಭೂ ಸುಧಾರಣೆ ಜಾರಿಗೆ ತಂದ, ದುರ್ಬಲರ ದನಿಯಾಗಿದ್ದ ಅರಸು ಅವರ ಜನ್ಮದಿನವಿಂದು. ಶಾಶ್ವತ ಕಾರ್ಯಗಳು, ಆಲೋಚನೆಗಳ ಮೂಲಕ ಸದಾ ನಮ್ಮೊಂದಿಗೆ ಇರುವ ಅರಸರ ಆದರ್ಶ ಇಂದು ಎಲ್ಲ ರಾಜಕಾರಣಿಗಳಿಗೂ ಮಾದರಿಯಾಗಲಿ.
Reply Retweet Like
H D Kumaraswamy Aug 19
ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ.
Reply Retweet Like
H D Kumaraswamy retweeted
Janata Dal Secular Aug 14
ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ನಿರ್ಧಾರ ತುಘಲಕ್ ನಿರ್ಧಾರದಂತಿದೆ. ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ.
Reply Retweet Like
H D Kumaraswamy Aug 14
73ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಪ್ರಕೃತಿಯ ವೈಪರೀತ್ಯದಿಂದಾಗಿ ನಮ್ಮ ರಾಜ್ಯದ ಹಲವು ಜಿಲ್ಲೆಗಳ ಜನತೆ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬರಗಾಲವೂ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಜನತೆಯ ರಕ್ಷಣೆಗೆ ಕಂಕಣ ಬದ್ಧರಾಗುವ ಮೂಲಕ ಸ್ವಾತಂತ್ರ್ಯ ಆಚರಿಸೋಣ.
Reply Retweet Like
H D Kumaraswamy Aug 14
ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು.
Reply Retweet Like
H D Kumaraswamy Aug 9
ಬೆಳಗಾವಿ ಜಿಲ್ಲೆಗೆ ಭೇಟಿ‌ ನೀಡಿ ಅಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಪಡೆದೆ.
Reply Retweet Like
H D Kumaraswamy Aug 9
Replying to @hd_kumaraswamy
Reply Retweet Like
H D Kumaraswamy Aug 9
ಅನಾರೋಗ್ಯವಿದ್ದರೂ, ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು ನನ್ನ ಮನಸ್ಸು ತುಡಿಯುತ್ತಿದೆ. ನಾಳೆ (10/8/19) ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ.
Reply Retweet Like
H D Kumaraswamy retweeted
Janata Dal Secular Aug 9
. does it again! People who came in hopes of CM listening to their grievances got LATHI CHARGE as gift. People are already in heavy loss because of floods and CM wants to beat them! Last time was CM, a farmer demanding fertiliser was shot dead on the road!
Reply Retweet Like
H D Kumaraswamy Aug 8
ಜ್ವರದಿಂದ ಬಳಲುತ್ತಿರುವ ಕಾರಣ ನಾನು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಒಂದೆರಡು ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ತೆರಳಿ ಜನರ ಕಷ್ಟಗಳಲ್ಲಿ ಭಾಗಿಯಾಗುತ್ತೇನೆ.
Reply Retweet Like
H D Kumaraswamy retweeted
Janata Dal Secular Aug 8
. ಅವರು ಬೆಳಗಾವಿ, ರಾಯಚೂರು, ಹಾಸನ, ಕೊಡಗು ಹಾಗೂ ಬಾಗಲಕೋಟೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಹಗಲಿರುಳು ಶ್ರಮ ಪಡುತ್ತಿರುವ ಅಧಿಕಾರಿಗಳು ಹಾಗೂ ವಿವಿಧ ಸಂಸ್ಥೆಗಳನ್ನು ಅಭಿನಂದಿಸಿದರು.
Reply Retweet Like
H D Kumaraswamy Aug 8
ಅತಿವೃಷ್ಟಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ನಮ್ಮ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದೇವೆ. ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ-ತಮ್ಮಂದಿರೊಂದಿಗೆ ನಿಲ್ಲೋಣ.
Reply Retweet Like
H D Kumaraswamy retweeted
Janata Dal Secular Aug 7
ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ! ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!
Reply Retweet Like
H D Kumaraswamy retweeted
Janata Dal Secular Aug 6
ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ.ಕರ್ನಾಟಕದಲ್ಲಿ ‌ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ.ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ..
Reply Retweet Like
H D Kumaraswamy Aug 6
I'm shocked to learn about the sudden demise of Former Chief Minister of Delhi, Former Union Minister ji. May her soul rest in peace. My condolences to her family and loved ones.
Reply Retweet Like
H D Kumaraswamy Jul 30
ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ.
Reply Retweet Like
H D Kumaraswamy Jul 27
ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಜೈಪಾಲ್ ರೆಡ್ಡಿ ಅವರ ನಿಧನದ ಸುದ್ದಿ ಮನಸ್ಸಿಗೆ ಬಹಳ ನೋವುಂಟುಮಾಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ.
Reply Retweet Like
H D Kumaraswamy Jul 27
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.
Reply Retweet Like
H D Kumaraswamy Jul 25
I pay homage to the brave soldiers who fought the war to protect the sovereignty of our country.
Reply Retweet Like
H D Kumaraswamy Jul 24
Replying to @hd_kumaraswamy
ಉಪವಿಭಾಗಾಧಿಕಾರಿಗಳನ್ನು ಇದಕ್ಕೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದ್ದು, 90 ದಿನಗಳೊಳಗೆ ಅರ್ಜಿ ಸಲ್ಲಿಸಿ ಸೂಕ್ತ ದಾಖಲೆ ನೀಡಿದಲ್ಲಿ ಋಣಮುಕ್ತರಾಗಬಹುದು. 1.20 ಲಕ್ಷ ರೂ.ಗಳಿಗಿಂತ ಕಡಿಮೆ ವಾರ್ಷಿಕ ಆದಾಯವಿರುವ ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದ್ದು, ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು.
Reply Retweet Like